ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ ಹೆಚ್.ಡಿ. ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಹಣ ಲೂಟಿಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಜನರ ತಲೆ ಮೇಲೆ ಸಾಲದ ಹೊರೆಯನ್ನ ಹೊರಸುತ್ತಿದೆ. ಗ್ಯಾರಂಟಿಗಳಿಗೆ ಮಾರುಹೋಗಿ ದಾರಿ ತಪ್ಪಬೇಡಿ ಎಂದಿದ್ದೇನೆ ಅಷ್ಟೇ..
ದಾರಿ ತಪ್ಪುವುದು ಎಂಬ ಪದ ಅಶ್ಲೀಲನಾ? ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೇನೆ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಪ್ರಚಾರದ ವೇಳೆ ಹಲವು ವಿಚಾರ ಪ್ರಸ್ತಾಪ ಮಾಡಿದ್ದೇನೆ. ನಾನು ನಾಡಿನ ಮಹಿಳೆಯರಿಗೆ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್ ಆರೋಪ ಮಾಡುತ್ತಿದೆ ಅಂತ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ರು.