ಕೊಪ್ಪಳ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಂಡಸರಿಗೂ ಉಚಿತ ಬಸ್ ಪ್ರಯಾಣ ಸಿಗಬಹುದು ಅಂತ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೃದಯ ದೊಡ್ಡದು, ಅವರು ಸದಾ ಬಡವರಿಗೆ, ರೈತರಿಗೆ ಮತ್ತು ಮಹಿಳೆಯರ ಒಳಿತಿನ ಬಗ್ಗೆ ಯೋಚನೆ ಮಾಡುತ್ತಾರೆ. ಒಂದು ವೇಳೆ ಕೇಂದ್ರದಲ್ಲಿ ಕಾಂಗ್ರೆಸ್ ರಚನೆ ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ 65 ಕ್ಕಿಂತ ಹೆಚ್ಚು ವಯೋಮಾನದ ಗಂಡಸರಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಬಹುದು ಎಂಬರ್ಥದಲ್ಲಿ ಬಸವರಾಜ ರಾಯರೆಡ್ಡಿ ಮಾತನಾಡಿದ್ದಾರೆ.