ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿರುವ ಶಿಲ್ಪಾ ಶೆಟ್ಟಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿಲ್ಪಾ ಹಾಗೂ ಪತಿ ರಾಜ್ ಕುಂದ್ರಾಗೆ ಸೇರಿದ ಸುಮಾರು 98 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿ, ಮುಂಬೈನ ಜುಹುದಲ್ಲಿರುವ ಅವರ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಿನಲ್ಲಿರುವ ಶೇರುಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
2017 ರಲ್ಲಿ6600 ಕೋಟಿ ರೂಪಾಯಿಯನ್ನು ರಾಜ್ ಕುಂದ್ರಾ ಹಾಗೂ ಅವರ ಸಂಗಡಿಗರು ಬಿಟ್ಕಾಯಿನ್ ಮೂಲಕ ಸಂಪಾದಿಸಿದ್ದರು. ಜೊತೆಗೆ ತಿಂಗಳಿಗೆ ಶೇ. 10 ಪಾವತಿಸುವುದಾಗಿ ಜನರಿಗೆ ಆಮಿಷ ಒಡ್ಡಿದ್ದರು. ಇದನ್ನು ಬಿಟ್ ಕಾಯಿನ್ ಹಗರಣ ಎಂದು ಆರೋಪಿಸಲಾಗಿದೆ. ಬಿಟ್ ಕಾಯಿನ್ ಪ್ರಕರಣದಿಂದ ರಾಜ್ ಕುಂದ್ರಾ ಪ್ರಸ್ತುತ 150 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ಇಡಿ ಹೇಳಿದೆ.
ರಾಜ್ ಕುಂದ್ರಾ ಅವರನ್ನು ಬಿಟ್ಕಾಯಿನ್ ಸೇರಿದಂತೆ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ರಾಜ್ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರಾಸ್ತಿಯ ಜೊತೆಗೆ ಬಂಗ್ಲೆ ಮತ್ತು ಶೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.