ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣದ ಸಂಬಂಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಸಿಬಿಐ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನವರಿ 25ಕ್ಕೆ ಮುಂದೂಡಿದೆ.
ಬೆಳಗಾವಿ ಅಧಿವೇಶನದ ವೇಳೆ ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ವರ್ ಉದ್ದೇಶಿಸಿ ಸಿ.ಟಿ.ರವಿ ಬಳಕೆ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಸಿ.ಟಿ.ರವಿ ಅವರ ಧ್ವನಿ ಪರೀಕ್ಷೆ ನಡೆಸುವ ಅಗತ್ಯತೆಯಿದೆ ಎಂದು ಸಿಐಡಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಬುಧವಾರ ನಡೆದ ಅರ್ಜಿ ವಿಚಾರಣೆ ವೇಳೆ, ಧ್ವನಿ ಪರೀಕ್ಷೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿ.ಟಿ.ರವಿ ಪರ ವಕೀಲರು ಕಾಲಾವಕಾಶ ಕೇಳಿದ್ದರು. ಹೀಗಾಗಿ ಮುಂದಿನ ವಿಚಾರಣೆಯನ್ನು ಜ.25ಕ್ಕೆ ಮುಂದೂಡಲಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc