ಮೈಕ್ರೋ ಫೈನಾನ್ಸ್ ಹಾವಳಿಯ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳೂ ಸಹ ಭಾಗಿಯಾಗಿದ್ದರು. ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ” ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ನಿಮ್ಮ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಕಟುವಾಗಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಪ್ರಶ್ನಿಸುತ್ತಾ, ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಫೈನಾನ್ಸ್ ಅಧಿಕಾರಿಗಳ ಮೇಲೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ .
ಫೈನಾನ್ಸ್ ಕಂಪನಿಗಳಿಗೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನ ಕೇಳಿ ತರಾಟೆಗೆ ತೆಗೆದುಕೊಂಡಿದ್ದಾರೆ.. ಹಾಗಾದ್ರೆ ಸಿಎಂ ಕೇಳಿದ ಪ್ರಶ್ನೆಗಳೇನು ಮತ್ತು ಮೈಕ್ರೋ ಫೌನಾನ್ಸ್ ಕಂಪನಿಗಳ ಉತ್ತರದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..
- ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.
- ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?
- ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ?
- ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು.
- ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ.
- ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ ಗುಡುಗಿದರು.
- ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ.
- ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc