ಉಡುಪಿ: ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ದೇಶದಲ್ಲಿ ಹೆಚ್ಚುತ್ತಲೇ ಇದೆ. ಯಾವಾಗಲೂ ಹೋಟೆಲ್, ಏರ್ಪೋರ್ಟ್, ಶಾಲೆಗಳಿಗೆ ಅನುಮಾನಸ್ಪದವಾಗಿ ಬಾಂಬ್ ಬೆದರಿಕೆ ಕರೆಗಳು ಬರುತ್ತಲೇ ಇದೆ. ಇನ್ನು ಇತ್ತೀಚೆಗೆ ಹಿಂದೂ ದೇವಾಲಯಗಳ ಮೇಲೂ ಈ ಬಾಂಬರ್ಗಳ ಕಣ್ಣು ಬಿದ್ದಿತ್ತು. ಆದ್ರೆ ಈ ಮಧ್ಯೆ ಬಾಂಬರ್ಗಳ ಕಣ್ಣು ರಾಜ್ಯಕ್ಕೂ ಬಿದ್ದಿದೆ. ಇದೀಗ ಉಡುಪಿ ಮತ್ತು ಮಂಗಳೂರಿನ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ಉಡುಪಿಯ ಪ್ರತಿಷ್ಠಿತ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದ್ದು, ಶಾರದಾ ರೆಸಿಡೆನ್ಷಿಯಲ್ ಸ್ಕೂಲ್ಗೆ ಇಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಭೇಟಿ ನೀಡಿ, ಶಾಲೆ ಕೊಠಡಿ, ಹಾಸ್ಟೆಲ್ನಲ್ಲಿ ಬಾಂಬ್ ಸ್ಕಾಡ್ನಿಂದ ಪರಿಶೀಲನೆ ಮಾಡಲಾಗಿದೆ.
ಮಂಗಳೂರು: ಉಡುಪಿ ಬೆನ್ನಲ್ಲೇ ಮಂಗಳೂರಿನ ಎರಡು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವುದಾಗಿ ವರದಿಯಾಗಿದ್ದು, ಇಮೇಲ್ ಮೂಲಕ ಕಿಡಿಕೇಡಿಗಳು ಬಾಂಬ್ ಬೆದರಿಕೆ ಮೇಲ್ ಕಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಸ್ಥಳಕ್ಕೆ ತೆರಳಿ ಶಾಲೆಯಲ್ಲಿ ಮಂಗಳೂರು ಪೊಲೀಸರು ಶೋಧಕಾರ್ಯ ನಡೆಸಿದ್ದು, ಶಾಲೆಯಲ್ಲಿ ಬಾಂಬ್ ಸ್ಕ್ವಾಡ್ ಯುನಿಟ್ ತನಿಖೆ ಆರಂಭಿಸಿದೆ. ಪಾಂಡೇಶ್ವರ ಹಾಗು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಗಳಿಗೆ ಈ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc