ಉತ್ತರಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನಲ್ಲೆಯಲ್ಲಿ ಕೋಟ್ಯಾಂತರ ಭಕ್ತರು ಸೇರಿದ್ದಾರೆ. ಅಮೃತ ಸ್ನಾನ ಮಾಡಲು ಭಕ್ತರು ಸರದಿ ಸಾಲಿನಲ್ಲಿ ನಿಲ್ಲಲು ತೆರಳಿದ್ದಾರೆ. ಆದರೆ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ತಡೆಗೋಡೆಗಳನ್ನು ದಾಟಿ ಅಮೃತಸ್ನಾನಕ್ಕೆ ಹೊರಡುವಾಗ ನೂಕು ನುಗ್ಗಲು ಪ್ರಾರಂಭವಾಗಿದೆ. ಈ ಘಟನೆಯಿಂದ ಹಲವು ಭಕ್ತರು ಗಾಯಗೊಂಡಿದ್ದರೆ, 10ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಆದರೆ ಸ್ಥಳದಲ್ಲಿರುವ ಮೂಲಗಳ ಮಾಹಿತಿಗಳ ಪ್ರಕಾರ ಯಾವುದೇ ಭಕ್ತರು ಮೃತಪಟ್ಟಿಲ್ಲ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ. ಮತ್ತು ಸ್ವಲ್ಪ ಸಮಯದ ಮಟ್ಟಿಗೆ ಅಮೃತ ಸ್ನಾನ ಸ್ಥಗಿತಗೊಳಿಸಲಾಗಿತ್ತು, ಆದರೆ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಮತ್ತೆ ಅಮೃತ ಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮತ್ತು ಕಾಲ್ತುಳಿತ ಪ್ರಕರಣ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಮಾತನಾಡಿದ್ದಾರೆ. ಘಟನೆ ಮಾಹಿತಿ ಪಡೆದು ಎಲ್ಲಾ ನೆರವಿಗೆ ಸೂಚಿಸಿದ್ದಾರೆ.
10 ಕೋಟಿ ಭಕ್ತರ ಆಗಮನ
ಬುಧವಾರ ಮೌನಿ ಅಮಾವಾಸ್ಯೆ. ಈ ಸಂದರ್ಭದಲ್ಲಿ ಅಮೃತ ಸ್ನಾನ ನಡೆಯಬೇಕಿತ್ತು. ಇದಕ್ಕಾಗಿ ಸುಮಾರು10 ಕೋಟಿ ಜನರು ಕುಂಭ ಮೇಳಕ್ಕೆ ಆಗಮಿಸಿದ್ದರು. ಅತಿಯಾದ ಜನಸಂದಣಿಯಿಂದಾಗಿ ಅವಘಡ ಸಂಭವಿಸಿದೆ. ಅನೇಕರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ, ಜನರು ಪ್ರಜ್ಞೆ ತಪ್ಪಿದರು. ಅಂತಹ ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 40ಕ್ಕೂ ಹೆಚ್ಚು ಆಂಬ್ಯುಲೆನ್ಸ್ಗಳನ್ನು ನಿಯೋಜಿಸಲಾಗಿತ್ತು.
ಮೌನಿ ಅಮಾವಾಸ್ಯೆಯಂದು ಶಾಹಿ ಸ್ನಾನ ರದ್ದು
ಅವಘಡದಿಂದ ಎಲ್ಲಾ 13 ಅಖಾಡಗಳು ಸಾಧು ಸಂತರ ಶಾಹಿ ಸ್ನಾನವನ್ನು ರದ್ದುಗೊಳಿಸಿದ್ದಾರೆ. ಮುಂದಿನ ಅಮೃತ ಸ್ನಾನ ಬಸಂತ್ ಪಂಚಮಿಯಂದು ನಡೆಸುತ್ತೇವೆ ಎಂದು ತಿಳಿಸಿದ್ದರು ಆದರೆ ಇಗ ಮತ್ತೆ ಅಮೃತ ಸ್ನಾನಕ್ಕೆ ಅವಕಾಶ ಕಲ್ಪಿಸವಾಗಿದೆ. ಜನಸಂದಣಿಯನ್ನು ನಿಯಂತ್ರಿಸಲು ಎಲ್ಲಾ 30 ಪ್ಲಟೂನ್ ಸೇತುವೆಗಳನ್ನು ತೆರೆಯಲಾಗಿದೆ. ಪ್ರಯಾಗ್ರಾಜ್ಗೆ ಕುಂಭ ಮೇಳಕ್ಕೆ ಹೋಗುವವರ ಪ್ರವೇಶವನ್ನು ನಿಲ್ಲಿಸಲಾಗಿದೆ. ರಸ್ತೆಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc