ರಾಯಚೂರು: ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾನ್ನಪ್ಪಿದ್ದಾನೆ. ಮಸ್ಕಿ ತಾಲೂಕಿನ ಯಾದೊಡ್ಡಿ ಗ್ರಾಮದ ಬಸನಗೌಡ (30) ಅಫಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.
ಘಟನೆ ವಿವರ
ಅಪಘಾತವು ಭಾನುವಾರ ಬೆಳಗ್ಗೆ ಸಂಭವಿಸಿದ್ದು, ಹುಣಕುಂಟಿ ಕ್ರಾಸ್ ಸಮೀಪದಲ್ಲಿ ಬಸನಗೌಡನ ಬೈಕ್ ಒಂದು ಕಾರಿನೊಂದಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯಾದ ಪರಿಣಾಮ ಬೈಕ್ ಪೂರ್ತಿಯಾಗಿ ನಜ್ಜುಗುಜ್ಜಾಯಿತು. ನಂತರ ಸುತ್ತಮುತ್ತಲಿನ ಜನ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೋಲಿಸ್ ತಂಡ, ಬಸನಗೌಡನ ದೇಹವನ್ನು ಪರಿಶೀಲಿಸಿ ಮೃತದೇಹವನ್ನು ಹುಣಕುಂಟಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಲಿಂಗಸ್ಗೂರು ಪೋಲಿಸ್ ಠಾಣೆಯ ಅಧಿಕಾರಿಗಳು ಘಟನೆಯ ಸ್ಥಳದಲ್ಲಿ ತನಿಖೆ ನಡೆಸಿ, ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc