ಪ್ರಯಾಗ್ರಾಜ್: ಲಕ್ಷಾಂತರ ಸನಾತನಧರ್ಮಿ ಭಕ್ತರ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿದೆ ಪ್ರಯಾಗ್ರಾಜ್ ಮಹಾಕುಂಭ ಮೇಳ. ಪ್ರತಿದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಭಕ್ತರು ಸಾಲು ಸಾಲಾಗಿ ಬರುತ್ತಿದ್ದಾರೆ.
ಈ ಪರ್ವಕಾಲದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಮತ್ತು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಭೇಟಿಯಾಗಿ ಮಹತ್ವಪೂರ್ಣ ಚರ್ಚೆ ನಡೆಸಿದ್ದಾರೆ.
ಶ್ರೀ ರವಿಶಂಕರ್ ಗುರೂಜಿ ಅವರು ಸಿಎಂ ಯೋಗಿಯವರನ್ನು ಸನಿಹಕ್ಕೆ ಕರೆದುಕೊಂಡು ಹೋಗಿ, ಯೋಗ ಸಾಧನೆ ಮತ್ತು ಲಿಂಗಾಯತ ಪಂಚಮಸಾಲಿ ಪೀಠದ ಪರಂಪರೆಯನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ, ಕರ್ನಾಟಕದಿಂದ ಕುಂಭ ಮೇಳಕ್ಕೆ ಆಗಮಿಸಿದ ಭಕ್ತರನ್ನು ಯೋಗಿ ಆದಿತ್ಯನಾಥ್ ಅವರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದು, “ಯೋಗಯುಕ್ತ ಮತ್ತು ರೋಗಮುಕ್ತ ಸಮಾಜ ನಿರ್ಮಾಣದಲ್ಲಿ ಅವರ ಸೇವಾಕಾರ್ಯ ಪ್ರಶಂಸನೀಯ” ಎಂದು ವಚನಾನಂದ ಸ್ವಾಮಿಗಳು ಪ್ರಸ್ತಾಪಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ವಿಜಯಾನಂದ ಸರಸ್ವತಿ ಸ್ವಾಮೀಜಿ ಮತ್ತು ಜರ್ಮನಿ ದೇಶದ ಯೂರೋಪಿಯನ್ ಪಾರ್ಲಿಮೆಂಟ್ ಸದಸ್ಯ ಜೋಶೆಪ್ ಲೆನಿನ್ ಅವರೂ ಉಪಸ್ಥಿತರಿದ್ದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc