ಫೆಬ್ರವರಿ 08 ರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಾವಳಿಗಳು ಪ್ರಾರಂಭವಾಗಲಿವೆ. ಈ ಹಿನ್ನಲೆಯಲ್ಲಿ ಇದೀಗ ನಟ ಸುದೀಪ್, ಡಿಸಿಎಂ ಡಿಕೆಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸದಾಶಿವ ನಗರದಲ್ಲಿರುವ ಡಿಸಿಎಂ ಡಿಕೆಶಿ ನಿವಾಸಕ್ಕೆ ಭೇಟಿ ನೀಡಿರುವ ಕಿಚ್ಚ ಸುದೀಪ್ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಸುದೀಪ್ ಅವರಿಗೆ ನಿರ್ದೇಶಕ ಅನೂಪ್ ಬಂಡಾರಿ ಸಾಥ್ ನೀಡಿರುವುದು ತಿಳಿದುಬಂದಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಸೆಲೆಬ್ರೆಟಿಗಳ ಸಿಸಿಎಲ್ ಪಂದ್ಯಾವಳಿಗಳು ಪ್ರಾರಂಭಗೊಳ್ಳಲಿವೆ. ಅದಕ್ಕಾಗಿ ಸ್ಯಾಂಡಲ್ ವುಡ್ ಮತ್ತು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವು ಕಪ್ ಗೆಲ್ಲುವ ತವಕದಲ್ಲಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc