ದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ವಿಚಾರವಾಗಿ ಮೋದಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಜಸ್ಥಾನದಲ್ಲಿ ಭಾಷಣ ಮಾಡಿದ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ಅಂಶಗಳನ್ನ ಪ್ರಸ್ತಾಪ ಮಾಡಿದ್ದಾರೆ. ಹೀಗಾಗಿ ನರೇಂದ್ರ ಮೋದಿಗೆ ತಮ್ಮ ಪ್ರಣಾಳಿಕೆಯ ಬಗ್ಗೆ ಅರಿವು ಮೂಡಿಸಲು ಕಾಂಗ್ರೆಸ್ ಮುಂದಾಗಿದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಣಾಳಿಕೆಯ ಬಗ್ಗೆ “ಅರಿವು” ಮೂಡಿಸಲು ಪ್ರಧಾನಿ ಮೋದಿ ಭೇಟಿಗೆ ಅಪಾಯಿಂಟ್ಮೆಂಟ್ ಕೇಳಿದ್ದಾರೆ.
ಈ ಬಗ್ಗೆ ತಿಳಿಸಿರುವ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಮೋದಿ ಆರೋಪಿಸಿದ್ದರು. ಅಲ್ಲದೆ ಅಲ್ಪಸಂಖ್ಯಾತ ಸಮುದಾಯಕ್ಕೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆ ತಪ್ಪಾಗಿಯನ್ನು ಉಲ್ಲೇಖಿಸಿದ್ದರು. ಮೋದಿ ಇದೆಲ್ಲವನ್ನು ಉದ್ದೇಶಪೂರ್ವಕವಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.