ಕೊನೆಗೂ ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಪರಿಹಾರ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,172 ಕೋಟಿ ಹಣ ಬೇಡಿಕೆ ಇಟ್ಟಿತ್ತು.
ಆದರೆ .ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗುತ್ತಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿತ್ತು. ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಕೇಂದ್ರ ಸರ್ಕಾರ, 3,454 ಕೋಟಿ ಪರಿಹಾರ ಘೋಷಣೆ ಮಾಡಿದೆ.