ಹುಬ್ಬಳ್ಳಿ: ಕೇಂದ್ರದ ಮಾಜಿ ಸಚಿವರು, ಸಂಸದರು ಆಗಿದ್ದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ದುಃಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಶ್ರೀನಿವಾಸ ಪ್ರಸಾದ್ ಅವರು, ಶಾಸಕರಾಗಿ, ಸಂಸದರಾಗಿ ಸುಮಾರು ಐವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಾನುರಾಗಿದ್ದರು. ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಹಿರಿಯ ನಾಯಕ ಹಾಗೂ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ. ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.