ಶಾರ್ಲೆಟ್ : ಅಮೆರಿಕಾದಲ್ಲಿ ಮತ್ತೆ ಶೂಟೌಟ್ ಆಗಿದ್ದು, ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸ್ ಅಧಿಕಾರಿಗಳು ಬಲಿಯಾಗಿದ್ದಾರೆ. ಇನ್ನು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಕೆರೋಲಿನಾದ ಮನೆಯೊಂದಕ್ಕೆ ಬಂಧೂಕುಧಾರಿಯೊಬ್ಬ ನುಗ್ಗಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತನನ್ನು ಹಿಡಿಯರು ಮುಂದಾದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.