ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಅನ್ನು ರದ್ದು ಮಾಡುವಂತೆ ಮೋದಿಗೆ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ. ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಬೇಕಿತ್ತು. ಅಲ್ಲದೆ, ಪ್ರಜ್ವಲ್ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್ಡಿಎ ಅಭ್ಯರ್ಥಿಯೂ ಆಗಿದ್ದಾರೆ.
ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್ ಮೇಲಿದೆ. ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.