ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿಗೆ ಕೋವಿಶೀಲ್ಡ್ ವ್ಯಾಕ್ಸಿನ್ ಕಾರಣನಾ..? ಎಂಬ ಅನುಮಾನ ಈಗ ಶುರುವಾಗಿದೆ. ಈ ಅನುಮಾನ ಈಗ ಮತ್ತಷ್ಟು ಗಾಢವಾಗುತ್ತಿದ್ದು, ಪುನೀತ್ ಅಭಿಮಾನಿಯೊಬ್ಬರು ಅಂದು ಮಾಡಿದ್ದ ಪೋಸ್ಟ್ ಒಂದು ಈಗ ಸಖತ್ ವೈರಲ್ ಆಗುತ್ತಿದೆ.
ಪುನೀತ್ ರಾಜ್ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದ್ದರು. ಸಖತ್ ಫಿಟ್ ಆಗಿದ್ದ ಪುನೀತ್ ರಾಜ್ ಕುಮಾರ್ ನಿಧನ ಹೊಂದಿದ್ದು, ಇದು ಎಲ್ಲರಿಗೂ ಶಾಕ್ ಆಗಿತ್ತು. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.
ಪುನೀತ್ ರಾಜ್ಕುಮಾರ್ಷ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಬೃಂದಾವನಾ ಎಂಬ ಹೆಸರಿನ ಖಾತೆಯಿಂದ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತು. ಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ. ಕೋವಿಶೀಲ್ಡ್ನಿಂದಲೇ ಪುನೀತ್ ಅವರ ರಕ್ತನಾಳದಲ್ಲಿ ಬ್ಲಡ್ ಕ್ಲಾಟ್ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.