ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಕ್ರಿಮಿನಲ್ ಪ್ರಕರಣದಲ್ಲಿ ಮಹಿಳೆಯೊಬ್ಬರ ಅಪಹರಣದ ಎಫ್ಐಆರ್ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಬಂಧನವಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿನ ದೇವೆಗೌಡರ ಮನೆಯಲ್ಲಿ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿಧಾನಸೌಧ ಬಳಿ ಇರುವ ಎಸ್ಐಟಿ ಕಚೇರಿಗೆ ರೇವಣ್ಣ ಅವರನ್ನ ಕರೆದೊಯ್ಯಲಾಗಿದೆ.