ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡ್ತಿದೆ. ಅಲ್ಲದೆ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ಅಪಹರಣ ಪ್ರಕರಣವೂ ದಾಖಲಾಗಿದೆ. ಪತಿ ಮತ್ತು ಪುತ್ರನ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖವಾಗಿದ್ದು ಅವರಿಗೂ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ. ಭವಾನಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ.
ಈ ಎರಡು ಕೇಸ್ನಲ್ಲಿ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ನ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಕಿಡ್ನಾಪ್ ಪ್ರಕರಣದಲ್ಲಿ “ಭವಾನಿ ರೇವಣ್ಣ ಅವರು ನಿಮ್ಮನ್ನು ಕರೆದುಕೊಂದು ಬಾ ಅಂತ ಹೇಳಿದ್ದಾರೆ” ಎಂದು ಹೇಳಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ. ಹೀಗಾಗಿ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಭವಾನಿ ರೇವಣ್ಣಗೆ ನೋಟಿಸ್ ನೀಡಿ ಮಾಹಿತಿ ಪಡೆದಿದೆ. ತನಿಖೆ ವೇಳೆ ಭವಾನಿ ವಿರುದ್ಧ ಸಾಕ್ಷ್ಯಾಧಾರಗಳು ಸಿಕ್ಕರೆ ಅವರು ಕೂಡ ಬಂಧನವಾಗುವ ಸಾಧ್ಯತೆ ಇದೆ.