ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.
ಡ್ರಗ್ಸ್ ಕೇಸ್ನಲ್ಲಿ ಶ್ರೀಕಿಯನ್ನು 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್ಕಾಯಿನ್ ಕೇಸ್ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್ಫಾರ್ಮ್ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್ ಕಾಯಿನ್ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ- ಸಂಗ್ರಹಣಾ ಪೋರ್ಟಲ್ ಜಾಲತಾಣ ಹ್ಯಾಕ್ ಮಾಡಿದ್ದನು.