ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2 ನೇ ಹಂತದ ಮತದಾನ ನಡೆದಿದ್ದು, ಚುನಾವಣೆ ಹಿನ್ನೆಲೆ ಉಡುಪಿಯ ಬೈಂದೂರಿನಲ್ಲಿ ನಟ ರಿಷಬ್ ಶೆಟ್ಟಿ ಮತದಾನ ಮಾಡಿದರು. ಬೈಂದೂರಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ರಿಷಬ್ ಅವರು ತಮ್ಮ ಮತ ಚಲಾಯಿಸಿದರು.
ಬಳಿಕ ಮಾತನಾಡಿ ಅವರು ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕಾಗಿ, ನಾನು ದೇಶಕ್ಕೆ ಮತ ಹಾಕಿದ್ದೇನೆ. ಮತದಾನ ನಮ್ಮ ಹಕ್ಕು, ಜವಾಬ್ದಾರಿ ಅದನ್ನು ಚಲಾಯಿಸಿದ್ದೇನೆ. ಸರ್ಕಾರದ ನಿರೀಕ್ಷೆ, ಬೇಡಿಕೆ ಹಾಗೂ ರಾಜಕೀಯದ ಬಗ್ಗೆ ಮಾತನಾಡಲ್ಲ. ನಾನು ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಎಂದರು.