ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿದ್ದ ಕೆ. ವಸಂತ ಬಂಗೇರ ಇಂದು ಮೇ 8ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1946 ರ ಜನವರಿ 15 ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದ ಕೆ. ವಸಂತ ಬಂಗೇರ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಬೆಳಗ್ಗೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ಸಾಧ್ಯತೆ ಇದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ ಎಂದು ತಿಳಿದುಬಂದಿದೆ.