- ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ
- ಜನತಾಪಕ್ಷ, ಈ ಘೋಷಣೆಯ ನೋಟಿಸ್ ಅನ್ನು ಬೆಂಗಳೂರಿನ ವಿವಿಧೆಡೆ ಅಂಟಿಸಿದೆ
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಜನತಾಪಕ್ಷ ಘೋಷಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜನತಾಪಕ್ಷ, ಈ ಘೋಷಣೆಯ ನೋಟಿಸ್ ಅನ್ನು ಬೆಂಗಳೂರಿನ ವಿವಿಧೆಡೆ ಅಂಟಿಸಿದ್ದು, ಶಿವಾನಂದ ಸರ್ಕಲ್, ಚಾಲುಕ್ಯ ಸರ್ಕಲ್, ಕೆಆರ್ ಸರ್ಕಲ್, ಫ್ರೀಡಂ ಪಾರ್ಕ್, ಮೌರ್ಯ ಸರ್ಕಲ್, ಆನಂದರಾವ್ ಸರ್ಕಲ್ವರೆಗೆ ನೋಟಿಸ್ ಅಂಟಿಸಲಾಗಿದೆ.