- 3 ನೇ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದೆ
- ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಕಲಂ 376 ಸೇರ್ಪಡೆ ಮಾಡಲಾಗಿದೆ.
- ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಏ. 28 ರಂದು ದೂರು ದಾಖಲಾಗಿತ್ತು
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ ದೇಶದೆಲ್ಲಡೆ ಭಾರೀ ಸದ್ದು ಮಾಡ್ತಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈಗಾಗಲೇ 2 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮತ್ತೆ 3 ನೇ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದೆ.
ಈ ಹಿಂದೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯು ನ್ಯಾಯಾಧೀಶರ ಎದುರು ಸಿಆರ್ಪಿಸಿ 164 ಅಡಿ ಹೇಳಿಕೆ ದಾಖಲಿಸುವಾಗ ಸಂಸದ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆ ಆ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಕಲಂ 376 ಸೇರ್ಪಡೆ ಮಾಡಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಏ. 28 ರಂದು ದೂರು ದಾಖಲಾಗಿತ್ತು.
ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ
ಐಪಿಸಿ ಸೆಕ್ಷನ್ 354 (ಡಿ) ಉದ್ದೇಶ ಪೂರ್ವಕ ದೇಹ ಸ್ಪರ್ಷ
ಐಪಿಸಿ ಸೆಕ್ಷನ್ 506 – ಅಡಿ ಜೀವ ಬೆದರಿಕೆ
ಐಪಿಸಿ ಸೆಕ್ಷನ್ 509 – ಸನ್ನೆ ಮೂಲಕ ಖಾಸಗಿ ತನಕ್ಕೆ ಧಕ್ಕೆ,
47 ವರ್ಷದ ಸಂತ್ರಸ್ತೆಯ ದೂರು ಆಧರಿಸಿ ಪೊಲೀಸರು ರೇವಣ್ಣ ಮತ್ತು ಪುತ್ರ ಪ್ರಜ್ವಲ್ ವಿರುದ್ಧ ನಾಲ್ಕು ಸೆಕ್ಷನ್ಗಳ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಇದೀಗ ಸಂತ್ರಸ್ತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸುವಾಗ ಪ್ರಜ್ವಲ್ ರೇವಣ್ಣ ತನ್ನ ಮೇಲೆ ರೇಪ್ ಮಾಡಿದ್ದಾಗಿ ಹೇಳಿಕೆ ನೀಡುವುದರಿಂದ ಈ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376 ಸೇರ್ಪಡೆ ಮಾಡಲಾಗಿದೆ. ಇದರಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದಿದೆ.