- ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂದ ಏಕನಾಥ್ ಶಿಂಧೆ
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ “ನಾಥ್” ಮಾದರಿ ಆಪರೇಷನ್ಗೆ ಮನವಿ
ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂದು ಏಕನಾಥ್ ಶಿಂಧೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತೆರೆಯ ಮರೆಯ ಕರ್ನಾಟಕದ ಬಿಜೆಪಿ ನಾಯಕರಿಂದಲೇ ತಮಗೆ ಆಪರೇಷನ್ ಮಾಡಲು ಆಹ್ವಾನವಿದೆ ಎಂದರು. “ನಾಥ್” ಮಾದರಿ ಆಪರೇಷನ್ ಮಹಾರಾಷ್ಟ್ರದಲ್ಲಿ ಖ್ಯಾತಿ ಗಳಿಸಿದೆ. ಅದೇ ಮಾದರಿಯ ಆಪರೇಷನ್ಗೆ ಕರ್ನಾಟಕದಿಂದಲೂ ಆಹ್ವಾನವಿದೆ ಎಂದರು.
ಮಹಾರಾಷ್ಟ್ರದ ಚುನಾವಣಾ ಪ್ರಚಾರದ ವೇಳೆ ಮೇ 9 ರಂದು ಏಕನಾಥ್ ಶಿಂಧೆ ಈ ಹೇಳಿಕೆ ನೀಡಿದ್ದಾರೆ. ಆಗ ಮಾಡನಾಡಿದ್ದ ಅವರು, ಲೋಕಸಭೆಯ ಚುನಾವಣೆಯ ನಂತರ ಕರ್ನಾಟಕ ಸರ್ಕಾರ ಪತನವಾಗಲಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ನಾನು ಕರ್ನಾಟಕಕ್ಕೆ ಹೋಗಿದ್ದಾಗ ಬಜೆಪಿ ಪದಾಧಿಕಾರಿಗಳು ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ “ನಾಥ್” ಮಾದರಿ ಆಪರೇಷನ್ಗೆ ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.