ತುಲಾ ರಾಶಿ: ಇಂದು ಸರ್ಕಾರಿ ಉದ್ಯೋಗಿಗಳು ಸವಲತ್ತುಗಳನ್ನು ಕೇಳಿ ಪಡೆಯಬೇಕಾಗುವುದು. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು. ಪುಣ್ಯಕ್ಷೇತ್ರಕ್ಕೆ ಕುಟುಂಬ ಜೊತೆ ಹೋಗಲಿದ್ದೀರಿ. ನಡೆದಾಡುವಾಗ ಜಾಗರೂಕತೆ ಇರಲಿ. ನಿಮ್ಮ ಶ್ರದ್ಧೆಗೆ ಭಂಗ ಬರುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ಇಂದು ಆದಾಯ ಮತ್ತು ಖರ್ಚನ್ನು ಸಮವಾಗಿ ತೂಗಿಸಿಕೊಂಡರೆ ಸ್ವಲ್ಪಮಟ್ಟಿನ ಚಿಂತೆ ದೂರಾಗುವುದು. ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ತುಂಬಾ ಮೋಜಿನಿಂದ ಇರುವಿರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿ ಇರುವುದು. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ದ್ವೇಷದಿಂದ ನಿಮ್ಮ ಜೀವನವು ನ್ನು ಮಾರ್ಗಭ್ರಷ್ಟವಾಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ಒತ್ತಡವಿಲ್ಲದೇ ಇಂದಿನ ವಹಿವಾಟನ್ನು ಮಾಡಿಮುಗಿಸುವಿರಿ.
ಧನು ರಾಶಿ: ಪ್ರಮಾಣವರಿತು ನಿಮ್ಮ ಜೊತೆ ಮಾತನಾಡುವರು. ಅನಿರ್ದಿಷ್ಟ ಅವಧಿಯವರೆಗೆ ಉದ್ಯೋಗದ ಕಾರಣಕ್ಕೆ ಓಡಾಟ ಮಾಡುವಿರಿ. ಇಂದು ನಿಮಗೆ ಹಳೆಯ ಘಟನೆಗಳಿಂದ ಪಾಪಪ್ರಜ್ಞೆ ಕಾಡಬಹುದು. ಕೆಲಸದ ಜಾಗದಲ್ಲಿ ಇನ್ನೊಬ್ಬರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭವನ್ನು ಪಡೆಯುವರು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಇಂದು ನಿಮಗೆ ಸ್ವತಂತ್ರವಾದಂತೆ ಅನ್ನಿಸಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು. ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು ಎಂಬ ಸತ್ಯವು ತಿಳಿಯಲಿದೆ. ಯೋಜನೆಯನ್ನು ಮಾಡುವಾಗ ಸರಿಯಾಗಿ ಇರಲಿ. ಒತ್ತಡಕ್ಕೆ ಅವಕಾಶವನ್ನು ಕೊಡದೇ ನೀವು ನೆಮ್ಮದಿಯಿಂದ ಇರಿ. ನಿಮ್ಮನ್ನು ನೀವು ಸುಧಾರಿಸಿಕೊಳ್ಳಬೇಕಾಗಬಹುದು. ಅನಿವಾರ್ಯವಾಗಿ ಸಿಕ್ಕ ಜವಾಬ್ದಾರಿಯನ್ನು ನಿಭಾಯಿಸುವುದು ಕಷ್ಟ.
ಮಕರ ರಾಶಿ: ಉದ್ವೇಗದಲ್ಲಿ ನೀವು ಭೋಜನವನ್ನು ಸರಿಯಾಗಿ ಮಾಡಲಾಗದು. ನಿಮ್ಮ ಕೆಲಸವು ಇಂದು ಅಪೂರ್ಣವಾಗಿದ್ದರೆ, ನಿಮ್ಮ ಮೇಲೆ ತುಂಬಾ ಕೋಪಗೊಳ್ಳಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ನೌಕರರು ಒಟ್ಟಿಗೆ ಪ್ರವಾಸ ಹೋಗಬಹುದು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಗೊಂದಲವನ್ನು ಮಾಡಿಕೊಂಡು ಹಣವನ್ನು ಕಳೆದುಕೊಳ್ಳಬೇಕಾಗಬಹುದು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಆಗುವ ಸಾಧ್ಯತೆ ಇದೆ.
ಕುಂಭ ರಾಶಿ: ಸಮಾರಂಭಗಳಿಗೆ ಬರುವ ಕರೆಯನ್ನು ನಿರಾಕರಿಸುವಿರಿ. ಚರಾಸ್ತಿಯನ್ನು ನೀವು ಬಿಡಬೇಕಾಗುತ್ತದೆ. ಇಂದು ನಿಮ್ಮ ಮನಸ್ಸು ಅನೇಕರ ಸಲಹೆಗಳ ಕಾರಣದಿಂದ ಬಹಳ ಚಂಚಲವಾಗಿರಲಿದೆ. ನೀವು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುವುದು. ನಿಮ್ಮ ಸಂಗಾತಿಯ ಆರೋಗ್ಯವಯ ಕ್ಷೀಣಿಸಿದ್ದು ನಿಮಗೆ ಆತಂಕವು ಹೆಚ್ಚಾಗಬಹುದು. ನಿಮ್ಮ ಕುತೂಹಲವು ಇಂದು ತಣಿಯಬಹುದು. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ವಿನಮ್ರತೆಯಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ಹೆಸರು ಮಾಡುವ ಭ್ರಮೆಯು ತಲೆಗೆ ಬರುವುದು. ಪರಿಚಿತರಿಂದ ಉಪದ್ರವ ಕಾಣಿಸೀತು.
ಮೀನ ರಾಶಿ: ಅಲ್ಪ ಅಂತರದಲ್ಲಿ ನಿಮ್ಮ ಆಸೆಯನ್ನು ಕಳೆದುಕೊಳ್ಳಬಹುದು. ರಾಜಕೀಯ ಬಲದಿಂದ ಇಂದು ಕಾರ್ಯಗಳು ಸಿದ್ಧಿಸುವುದು. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರ ಸಿಗಲಿದೆ. ಉದ್ಯಮಿಗಳು ಇಂದು ದೊಡ್ಡ ಲಾಭವನ್ನು ಗಳಿಸುವ ಯೋಜನೆಯನ್ನು ನಿರೀಕ್ಷಿಸುವರು. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನೀವು ಗಳಿಸಲಾಗದ್ದನ್ನು ಉಳಿಸಿಕೊಳ್ಳಲೂ ಆಗದು. ನಿಮ್ಮ ವೈವಾಹಿಕ ಜೀವನದ ಹಳೆಯ ನೆನಪು ನಿಮಗೆ ಖುಷಿಕೊಡಬಹುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ವಿರೋಧಿಗಳು ನಿಮ್ಮ ವಿರುದ್ಧ ತಂತ್ರ ಹೂಡಬಹುದು ಮಕ್ಕಳ ಮೇಲೆ ದಾಳಿ ಒಂದು ಕಣ್ಣಿರಲಿ. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ. ಸಂಗಾತಿಗೆ ಮೌಲ್ಯಯುತವಾದ ವಸ್ತುವನ್ನು ಕೊಡಿಸುವಿರಿ.