ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಪ್ರೀತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ,
ರಾಹು ಕಾಲ ಮಧ್ಯಾಹ್ನ 03:10 ರಿಂದ ಸಂಜೆ 04:35
ಯಮಘಂಡ ಕಾಲ ಬೆಳಿಗ್ಗೆ 09:30 ರಿಂದ 10:55
ಗುಳಿಕ ಕಾಲ ಮಧ್ಯಾಹ್ನ 12:20 ರಿಂದ 01:45
ತುಲಾ ರಾಶಿ: ಸಂಗಾತಿಯ ಜೊತೆ ಮೋಜಿನಲ್ಲಿ ಇರುವಿರಿ. ಇಂದು ನಿಮ್ಮಲ್ಲಿ ಉತ್ಸಾಹವಿದ್ದು ನೀವೇ ಸ್ವತಃ ಜವಾಬ್ದಾರಿಯನ್ನು ಪಡೆಯುವಿರಿ. ನಿಮ್ಮದಾದ ಸಂಪತ್ತನ್ನು ಇನ್ನೊಬ್ಬರಿಗೆ ಕೊಡಬೇಕಾಗುವುದು. ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುತ್ತದೆ. ನಿಮ್ಮಲ್ಲಿರುವ ಅಲ್ಪ ಸ್ವಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಹೂಡಿಕೆಯಿಂದ ಅಲ್ಪ ಹಣವನ್ನು ಕಳೆದುಕೊಳ್ಳಬೇಕಾಗುವುದು. ಇಂದಿನ ನಿಮ್ಮ ಮಾರಾಟದಿಂದ ಬೆಲೆಯು ಸಿಗದು. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಮೋಜಿಗಾಗಿ ಹಣವನ್ನು ಖರ್ಚು ಮಾಡಬೇಕಾದೀತು. ಕೂಡಿಟ್ಟ ಹಣವನ್ನು ನೀವು ಬಿಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಬಹುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ. ಇಂದು ಖರೀದಿಸಿದ ಹೊಸ ವಸ್ತುವಿನಿಂದ ನಿಮಗೆ ಖುಷಿಯಾಗುವುದು.
ವೃಶ್ಚಿಕ ರಾಶಿ: ಇಂದು ಕೆಲವರ ಅಗಲಿಕೆಯು ನಿಮ್ಮನ್ನು ಕಾಡಬಹುದು. ವ್ಯಾವಹಾರಿಕ ಸಂಬಂಧವನ್ನು ಹಾಗೆಯೇ ಇಟ್ಟುಕೊಂಡರೆ ಒಳ್ಳೆಯದು. ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಹಣ ಕೊಟ್ಟರೆ ಎಲ್ಲವೂ ಸಿಗದು. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಅಡ್ಡಿಬರಬಹುದು. ಆಲಸ್ಯದಿಂದ ಮುಕ್ತಿ ಪಡೆಯುವುದು ಅಸಾಧ್ಯವೆನಿಸಬಹುದು. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ. ಕಷ್ಟವೆಂದು ಸಿಕ್ಕ ಕೆಲಸವನ್ನು ಬಿಡುವಿರಿ. ಏನಾದರೂ ಹೇಳಬೇಕೆಂದು ಇದ್ದರೆ ನೇರವಾಗಿ ಹೇಳಿ. ಅಮಂಗಲವಾದ ಕಾರ್ಯಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ರಾಜಕೀಯ ಏರಿಳಿತದಿಂದ ನಿಮ್ಮ ನಿರ್ಧಾರವು ಸರಿಯಾಗದು.
ಧನು ರಾಶಿ: ಭೇದವನ್ನು ಲೆಕ್ಕಿಸುತ್ತ ಕುಳಿತರೆ ಕೆಲಸವಾಗದು. ನಿಮ್ಮ ನಿಯೋಜಿತ ಕಾರ್ಯಗಳನ್ನು ಮಾಡಲು ಜನರು ಸಿಗದೇಹೋಗಬಹುದು. ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವವವನ್ನು ವಹಿಸುವಿರಿ. ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ನಿಮ್ಮ ನೈರಂತರ್ಯವು ಓದಿನಲ್ಲಿಯೂ ಇರಲಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು. ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ. ಸಮಯಕ್ಕೆ ಬೆಲೆಯನ್ನು ಕೊಡುವುದು ಉತ್ತಮ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ನಿಮಗೆ ಕಷ್ಟವಾದೀತು.
ಮಕರ ರಾಶಿ: ನಿಮಗೆ ಆಹಾರದಿಂದ ತೃಪ್ತಿ ಸಿಗದು. ನಿಮ್ಮ ಮಕ್ಕಳನ್ನು ಸರಿಯಾದ ಮಾರ್ಗಕ್ಕೆ ತರಲು ಸಮಯವು ಬೇಕಾಗುವುದು. ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ಸರಿಯಾದ ಸಮಯಕ್ಕೆ ಉತ್ತಮ ವೈದ್ಯರ ಸಲಹೆಯನ್ನು ಪಡೆಯಿರಿ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಹೊಸ ಉದ್ಯೋಗಕ್ಕೆ ಬೇಕಾದ ಸಿದ್ಧತೆಯನ್ನೂ ಆಲೋಚಿಸುವಿರಿ. ಯಾರೋ ಕೊಟ್ಟದ್ದನ್ನು ಸ್ವೀಕರಿಸುವುದಿಲ್ಲ. ಗೆಲುವನ್ನು ಸಾಧಿಸಲು ಛಲವಿರುವುದು. ಅಪರಿಚಿತರು ಕೊಟ್ಟಿದ್ದನ್ನು ಸ್ವೀಕರಿಸುವುದಿಲ್ಲ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು.
ಕುಂಭ ರಾಶಿ: ಎಲ್ಲವೂ ನಿಮ್ಮ ಕೈಯಲಿದೆ ಎಂದುಕೊಂಡು ಬೀಗುವುದು ಬೇಡ. ಸಾಮಾಜಿಕ ಕಾರ್ಯಗಳ ಬಗ್ಗೆ ಕಿವಿಮಾತನ್ನು ಆಪ್ತರು ಹೇಳುವರು. ಪ್ರೇಮದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ಮುಂದುವರಿಯುವುದು ಮುಖ್ಯವಾದೀತು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಭೀತಿಯಿಂದ ನೀವು ಕೆಲವನ್ನು ಮಾಡದೇ ಇರುವಿರಿ. ಇರುವುದರಲ್ಲಿ ನೆಮ್ಮದಿಯನ್ನು ಕಾಣುವುದು ಮುಖ್ಯವಾದೀತು. ಮನಸ್ಸಿನ ಚಾಂಚಲತ್ಯವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಮೇಲಧಿಕಾರಿಗಳಿಂದ ತೊಂದರೆ ಬರಬಹುದು. ಕೆಲವರ ವಿಚಾರದಲ್ಲಿ ನಿಮ್ಮ ಅಭಿಪ್ರಾಯವು ಬದಲಾಗಬಹುದು. ಭೂ ವ್ಯವಹಾರದಲ್ಲಿ ನಿಶ್ಚಿತ ಲಾಭವು ಪ್ರಾಪ್ತವಾಗಲಿದೆ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ.
ಮೀನ ರಾಶಿ: ಯಾವುದನ್ನೂ ಮೊದಲಿನಂತೆ ಮಾಡಲಾಗದು ಎಂಬ ಭ್ರಮೆಯ ನಿರಸನವಾಗಲಿದೆ. ನಿಮ್ಮ ಇಂದಿನ ಶ್ರಮವು ಎಷ್ಟೇ ಇದ್ದರು ಒಂದು ಮಾತು ಎಲ್ಲದಕ್ಕೂ ತಣ್ಣೀರು ಹಾಕುವುದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಶತ್ರುಗಳ ಉಪಟಳ ಕಡಿಮೆ ಆಗಿದ್ದು ವೈಯಕ್ತಿಕ ಯೋಜನೆಗೆ ಸಮಯ ಕೊಡಲಾದೀತು. ಮಾತನ್ನು ನಿಯಂತ್ರಿಸಿರುವುದು ಮಿತ್ರರಿಗೆ ಆಶ್ಚರ್ಯ ಎನಿಸುವುದು. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳಿ. ನಿಮ್ಮ ಮನಸ್ಸನ್ನು ಸಂಗಾತಿಯು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬಹುದು.