ಮೈಸೂರು ಹಾಲಿ ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಲೋಕಸಭೆ ಟಿಕೆಟ್ ಕೈ ತಪ್ಪಿರಬಹುದು. ಆದರೆ ರಾಜ್ಯ ರಾಜಕಾರಣದಲ್ಲಿ ಅವರಿಗೆ ಉಜ್ವಲ ಭವಿಷ್ಯ ಇದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಮಡಿಕೇರಿಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ., ನಮ್ಮ ಪಕ್ಷದಲ್ಲಿ ಶ್ರಮಕ್ಕೆ ಮನ್ನಣೆ ಸಿಗುತ್ತದೆ’ ಎಂದರು. ಮಡಿಕೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಬಿಜೆಪಿ ಸೇರಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರ ಪ್ರಯತ್ನದಿಂದ ಯದುವೀರ್ ಒಡೆಯರ್ ಅವರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ವಿಜಯೇಂದ್ರ ಹೇಳಿದ್ರು.