ಮೈಸೂರು : ಹುಬ್ಬಳ್ಳಿ ಹತ್ಯೆ ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲದೇ ಆರೋಪಿ ಬಗ್ಗೆ ಸರ್ಕಾರ ಮೃಧು ಧೋರಣೆ ಹೊಂದಿದೆ ಅಂತ ಆರೋಪಿಸಿರುವ ಬಿಜೆಪಿ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಿಡಿಗೇಡಿಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ. ಸಚಿವರೆ ಬೇಜವಾಬ್ದಾರಿ ಹೇಳಿಕೆಗಳನ್ನ ನೀಡುತ್ತಿದ್ದಾರೆ ಅಂತ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.