ಭಾರತಕ್ಕೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ಫೆಂಗಲ್ ಸೈಕ್ಲೋನ್ ನೆರೆ ರಾಜ್ಯ ತಮಿಳುನಾಡಿಗೆ ಎಂಟ್ರಿ ಕೊಟ್ಟಿದ್ದು ಮೈಲಾಡುತುರೈ, ಕಡಲೂರು ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಳೆದ 2 ದಿನಗಳಿಂದ ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿದ್ದು ಇದೀಗ ಹೊಸ ಸೈಕ್ಲೋನ್ ಅಪ್ಪಳಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಫೆಂಗಲ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಮಾತ್ರವಲ್ಲ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಕಳೆದ 2 ದಿನಗಳಿಗಿಂದ ಇಂದು (ನ.27) ಚಳಿ ಹೆಚ್ಚಾಗಿದ್ದು ಮುಂದಿನ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದ ಸಮುದ್ರದ ಮೇಲೆ ಆಳವಾದ ಖಿನ್ನತೆ, ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇದು ಕಳೆದ 24 ಗಂಟೆಗಳಿಗಿಂತಲೂ ಹೆಚ್ಚಿನ ವೇಗ ಪಡೆದುಕೊಂಡಿದೆ. ಇಂದು ನವೆಂಬರ್ 27ರಂದು ಸ್ಪಷ್ಟ ಚಂಡಮಾರುತವಾಗಿ ಬದಲಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಮುಖ್ಯಸ್ಥರು ಮತ್ತು ವಿಜ್ಞಾನಿ ಡಾ. ಎನ್.ಪುವಿಯರಸನ್ ಅವರು ತಿಳಿಸಿದ್ದಾರೆ.