ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸುವುದು ಹಾಗೂ ಕೆಲಸಗಳಿಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಆದರೂ ಬೆಂಗಳೂರನಲ್ಲಿ ಭಿಕ್ಷಾಟನೆಗೆ ಬ್ರೇಕ್ ಹಾಕಲು ಸಾಧ್ಯವಾಗ್ತಿಲ್ಲ. ಸಿಲಿಕಾನ್ ಸಿಟಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸಿಸಿಬಿ ಅಧಿಕಾರಿಗಳು, ಕಾರ್ಯಾಚರಣೆಗೆ ಇಳಿದಿದ್ದಾರೆ. ಮೊನ್ನೆಯಷ್ಟೇ ಸಿಸಿಬಿ ಅಧಿಕಾರಿಗಳು ರಸ್ತೆಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಮಕ್ಕಳನ್ನ ರಕ್ಷಿಸಿದ್ದಾರೆ. ಇನ್ನು ಮನೆಮನೆಗೆ ಹೋಗಿ, ಟ್ರಾಫಿಕ್ ಸಿಗ್ನಲ್ ಬಳಿ ನಿಂತು ಭಿಕ್ಷಾಟನೆ ಮಾಡುವ 36 ಮಹಿಳೆಯರನ್ನ ವಶಕ್ಕೆ ಪಡೆಯಲಾಗಿದೆ.
ಸಿಸಿಬಿ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು. ರಂಜಾನ್ ಹಬ್ಬದಂದು ಅಪ್ರಾಪ್ತ ಮಕ್ಕಳಿಂದ ಪುಲಿಕೇಶಿನಗರದಲ್ಲಿ ಭಿಕ್ಷಾಟನೆ ಮಾಡಿಸಲಾಗುತ್ತಿತ್ತು. ಈ ವೇಳೆ ಸಿಸಿಬಿ ಪೊಲೀಸರು ಮತ್ತು ಮಹಿಳಾ & ಮಕ್ಕಳ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ರಕ್ಷಿಸಿದ್ದಾರೆ. ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ಪೊಲೀಸರು, ಮಕ್ಕಳ ಕಲ್ಯಾಣ ಸಮಿತಿಗೆ (CWC) ನೀಡಿದ್ದಾರೆ.