ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾತನಾಡಿಉದ. ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ.
ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.