ಲೋಕಸಭಾ ಚುನಾವಣಾ ಅಖಾಡದಲ್ಲಿ ಸಿದ್ದರಾಮಯ್ಯ ಸರ್ಕಾರದ ಪತನದ ಬಗ್ಗೆ ಮತ್ತೊಬ್ಬ ಬಿಜೆಪಿ ನಾಯಕ ಭವಿಷ್ಯ ನುಡಿದಿದ್ದಾರೆ. ಚಿಕ್ಕೋಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಲೋಕಸಭೆ ಚುನಾವಣೆ ಬಳಿಕ, ರಾಜ್ಯದಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆಯೂ ನಡೆಯಬಹುದು.
ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದಿಂದ ಅತೀ ಹೆಚ್ಚು ಬಿಜೆಪಿ ಶಾಸಕರು ಆಯ್ಕೆ ಆಗಲಿದ್ದಾರೆ. ಉತ್ತರ ಕರ್ನಾಟಕದ ಮಾಸ್ ಲೀಡರ್ ಒಬ್ಬರು ಮುಖ್ಯಮಂತ್ರಿ ಆಗ್ತಾರೆ ಅಂತ ಪರೋಕ್ಷವಾಗಿ ಹೇಳಿದರು.