ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಗೆ ಮತ್ತೊಂದು ವಿಕೆಟ್ ಪತನಗೊಂಡಿದೆ. ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕರಡಿ ಸಂಗಣ್ಣ ಅವರನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ತಾನು ಕಾಂಗ್ರೆಸ್ಗೆ ವಾಪಸ್ ಆಗಲು ಲಕ್ಷ್ಮಣ್ ಸವದಿ ಕಾರಣ ಅಂತ ತಿಳಿಸಿದ ಕರಡಿ ಸಂಗಣ್ಣ, 14 ವರ್ಷಗಳ ಹಿಂದೆ ನಾನು ಕಾಂಗ್ರೆಸ್ನಲ್ಲಿದ್ದಾಗ ಬಿಜೆಪಿಗೆ ಸೇರಿಸಿದ್ರು, ಈಗ ಲಕ್ಷ್ಮಣ್ ಸವದಿ ಅವರೆ ಮುಂದೆ ನಿಂತು ಕಾಂಗ್ರೆಸ್ ಸೇರ್ಪಡೆ ಮಾಡಿಸಿದ್ದಾರೆ ಅಂತ ತಿಳಿಸಿದರು.