ರಾಜ್ಯದಲ್ಲಿ ಏಪ್ರಿಲ್ 18 ರಂದು ಸಿಇಟಿ ಪರೀಕ್ಷೆ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ ಹಾಗೂ ಬಿಎಸ್ಸಿ (ನರ್ಸಿಂಗ್ ) ಮುಂತಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಯು ಏಪ್ರಿಲ್ 18 ಮತ್ತು 19, 20 ರಂದು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳು ಸುಗಮವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಸಿಇಟಿ ವೇಳಾಪಟ್ಟಿ
ಏ. 18 – ಬೆಳಗ್ಗೆ 10.20 ಗಂಟೆಗೆ ಜೀವಶಾಸ್ತ್ರ ಪರೀಕ್ಷೆ ಮತ್ತು ಮಧ್ಯಾಹ್ನ 2.20ರಿಂದ ಗಣಿತ ಪರೀಕ್ಷೆ
ಏ. 19 – ಬೆಳಗ್ಗೆ 10.20 ಗಂಟೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2 .20 ಗಂಟೆಗೆ ರಾಸಾಯನ ಶಾಸ್ತ್ರ ಪರೀಕ್ಷೆ
ಏ. 20ರಂದು ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆ ನಡೆಯಲಿದೆ.