ತಾಯಿ-ಮಗನ ಸಂಬಂಧದಲ್ಲಿ ಅನಗತ್ಯ ವಿವಾದ ಸೃಷ್ಟಿಸಬೇಡಿ: ಸುಮಲತಾ

111 (11)

ನಟ ದರ್ಶನ್‌ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಸುಮಲತಾ ಅಂಬರೀಶ್‌ ಮತ್ತು ಅವರ ಕುಟುಂಬದ ಕೆಲವೊಬ್ಬರನ್ನು ಅನ್‌ಫಾಲೋ ಮಾಡಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ಸಂಬಂಧ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ದರ್ಶನ್‌

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮಾಜಿ ಸಂಸದೆ ಸುಮಲತಾ ಅಂಬರೀಶ್‌, ಅಭಿಷೇಕ್‌ ಅಂಬರೀಶ್‌, ಅವಿವಾ ಬಿದ್ದಪ್ಪ, ವಿನೀಶ್‌ ಅವರನ್ನೂ ಅನ್‌ಫಾಲೋ ಮಾಡಿದ್ದರು. ಇದರಿಂದಾಗಿ ಅವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ. ಇದಕ್ಕೆ ಸಂಬಂಧಿಸಿದಂತೆ, ಸುಮಲತಾ ಅವರ ಇನ್‌ಸ್ಟಾಗ್ರಾಂ ಪೋಸ್ಟ್‌ ಕೂಡಾ ವೈರಲ್‌ ಆಗಿತ್ತು.

ADVERTISEMENT
ADVERTISEMENT

 ಸುಮಲತಾ ಅವರ ಪ್ರತಿಕ್ರಿಯೆ

ನಟ ದರ್ಶನ್‌ ಇನ್ಸ್ಟಾಗ್ರಾಂನಲ್ಲಿ ಆನ್‌ಫಾಲೋ ಮಾಡಿದ ನಂತರ ಸಂಸದೆ ಸುಮಲತಾ ಅಂಬರೀಶ್‌ ಅವರು ಒಂದು ಪೋಸ್ಟ್‌ ಹಂಚಿಕೊಂಡಿದ್ದರು. ಈ ಒಂದು ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ವಿವಾದ ಸೃಷ್ಟಿಸಿದ ನಂತರ ಸುಮಲತಾ ಅವರು ಮತ್ತೊಂದು ಪೋಸ್ಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

 ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ, ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ.

ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು. ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ.

ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ. ನನ್ನ ಪೋಸ್ಟ್‌ ಯಾರನ್ನೂ ಉದ್ದೇಶಿಸಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ನಾನು ನನ್ನ ಕುಟುಂಬ ಹಾಗೂ ಆಪ್ತರ ವಿಚಾರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎಳೆದು ತರುವ ಅಭ್ಯಾಸವನ್ನು ಎಂದಿಗೂ ಹೊಂದಿಲ್ಲ ಎಂದು ಪೋಸ್ಟ್‌ ಮಅಡುವ ಮೂಲಕ ಹೇಳಿಕೆ ನೀಡಿದ್ದಾರೆ. 

ಕೊನೆಗೂ ಸತ್ಯ ಏನು?

ನಟ ದರ್ಶನ್‌ ಅವರ ಇನ್‌ಸ್ಟಾಗ್ರಾಮ್‌ ಅನ್‌ಫಾಲೋ ವಿಚಾರವು ಅವರ ವೈಯಕ್ತಿಕ ಆಯ್ಕೆ ಎಂದು ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು ಮತ್ತು ಮಾಧ್ಯಮಗಳು ಈ ವಿಷಯವನ್ನು ಬೇರೆ ರೀತಿ ಅರ್ಥೈಸದೆ, ಅವರ ವೈಯಕ್ತಿಕ ಜೀವನಕ್ಕೆ ಗೌರವ ನೀಡುವುದು ಮುಖ್ಯ.

ಸಿನೆಮಾ ಶೂಟಿಂಗ್‌ನಲ್ಲಿ ಬ್ಯುಸಿಯಾದ ದರ್ಶನ್‌

ನಟ ದರ್ಶನ್‌ ಅವರು ಈ ಎಲ್ಲ ಸುದ್ದಿಗಳ ನಡುವೆಯೂ ತಮ್ಮ ಮುಂದಿನ ಚಿತ್ರ ಡೆವಿಲ್‌ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಯ ಆಶೀರ್ವಾದ ಪಡೆದು ಅವರು ಶೂಟಿಂಗ್‌ಗೆ ಚಾಲನೆ ನೀಡಿದ್ದಾರೆ.

ರೇಣುಕಾಸ್ವಾಮಿ ಪ್ರಕರಣ

ನಟ ದರ್ಶನ್‌ ಅವರ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಎಂಬುವವರು ಫೇಕ್‌ ಅಕೌಂಟ್‌ ಬಳಸಿ ಅಶ್ಲೀಲ ಕಾಮೆಂಟ್‌ ಮಾಡಿದ್ದರಿಂದ, ಈ ಪ್ರಕರಣ ಕೊಲೆಯವರೆಗೆ ತಲುಪಿತ್ತು. ಈ ಸಂಬಂಧ ದರ್ಶನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಅವರು ಈಗ ತಮ್ಮ ಶೂಟಿಂಗ್‌ ಕಾರ್ಯದಲ್ಲಿ ತೊಡಗಿದ್ದಾರೆ.

 

Exit mobile version