ಈ ವಾರ ತೆರೆಗೆ ಬರುತ್ತಿದೆ ಹೊಸ ತಂಡದ ಹೊಸ ಪ್ರಯತ್ನ “ಮಾಂಕ್ ದಿ ಯಂಗ್”

Befunky collage (75)

ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾ ಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ.

ADVERTISEMENT
ADVERTISEMENT

ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಜನರ ಮನ ತಲುಪಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈವರೆಗೂ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮಾಸ್ಚಿತ್ ಸೂರ್ಯ ನಿರ್ದೇಶಿಸಿದ್ದಾರೆ.

ಸರೋವರ್ ಅವರು ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಸೌಂದರ್ಯ ಗೌಡ. ತೆಲುಗು ಹಾಗೂ ತಮಿಳಿನ ಪ್ರಸಿದ್ದ ನಟ ಬಬ್ಲೂ ಪೃಥ್ವಿರಾಜ್ ಅವರು ಈ ಚಿತ್ರದ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದು, ಉಷಾ ಭಂಡಾರಿ, ಪ್ರಣಯ ಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ನಿವೃತ್ತ ಆರ್ಮಿ ಆಫೀಸರ್ ಕರ್ನಲ್ ರಾಜೇಂದ್ರನ್, ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ, ಗೋಪಿಚಂದ್, ಲಾಲ್ ಚಂದ್ ಖತಾರ್ ಮತ್ತು ಸರೋವರ್ ಐದು ಜನ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ಮಾಪಕರೆಲ್ಲಾ ಈ ಚಿತ್ರದಲ್ಲಿ ನಟನೆಯನ್ನೂ ಮಾಡಿರುವುದು ವಿಶೇಷ.

ಕಾರ್ತಿಕ್ ಶರ್ಮ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಕ್ಲೈಮಾಕ್ಸ್ ಛಾಯಾಗ್ರಹಣ ದೀಪಕ್ ಹಾಗೂ ಧನುಷ್ ಬೆದ್ರೆ ಅವರ ಸಂಕಲನ ಹರ್ಷವರ್ಧನ್ ಏ ಎಲ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Exit mobile version