ಬೀದರ್ : ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರುಅವರು ಬೀದರ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ? ಎಂದು ಪ್ರಶ್ನಿಸಿದರು.
ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಅವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.