ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.
ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರನ್ನು ಅಭಿನಂದಿಸಿದರು. ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.