ಚಿಕ್ಕಬಳ್ಳಾಪುರ : ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿಎಂಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದರು. ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಹೇಳಿದರು.ಭ್ರಷ್ಟಾಚಾರಿ ಎನ್ನುವ ಕಾರಣಕ್ಕೆ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದರು.NDA ಅಭ್ಯರ್ಥಿ ಸುಧಾಕರ್ ಅವರಿಗೆ ಜನತಾ ನ್ಯಾಯಾಲಯದಲ್ಲಿ ನೀವೂ ಶಿಕ್ಷೆ ಕೊಡಬೇಕು. ಶಿಕ್ಷೆ ಕೊಟ್ಟರೆ ಮಾತ್ರ ಕ್ಷೇತ್ರದ ಜನತೆಯ ಹೆಸರಿನಲ್ಲಿ ಮಾಡಿದ ಮೋಸಕ್ಕೆ ಮತ್ತು ಮಂತ್ರಿಯಾಗಿ ಮಾಡಿದ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಮಾಡಿದಂತಾಗುತ್ತದೆ ಎಂದರು.