ರೈತರ ಆದಾಯ ದುಪ್ಪಟ್ಟು ಆಗಿದ್ದಾರೆ ಅನೇಕ ತಿಂಗಳಿನಿಂದ ರೈತರು ಪ್ರತಿಭಟನೆ ಏಕೆ ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಾಗಮಂಗಲ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟು ಭ್ರಮೆ ಹುಟ್ಟಿಸಿದರು ಎಂದರು. ಮನ್ ಮೋಹನ್ ಸಿಂಗ್ ದೇಶ ಕಂಡ ದೊಡ್ಡ ಆರ್ಥಿಕ ತಜ್ಞ. ಅವರು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರು. ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉದ್ಯೋಗ ಹಕ್ಕುಗಳನ್ನು ಮನ್ ಮೋಹನ್ ಸಿಂಗ್ ಜಾರಿಗೆ ತರುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಮೂಲಭೂತ ಹಕ್ಕುಗಳನ್ನಾಗಿಸಿದರು. ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸಿನ ಸಚಿವರಾಗಿದ್ದ ಅವರು ದೇಶವನ್ನು ಆರ್ಥಿಕವಾಗಿ ಸಧೃಡವಾಗಿಸಿದರು ಎಂದರು.