ಮೈಸೂರು : ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ಸಬ್ ಕಾ ಸಾಥ್ ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಹೆಚ್ಚು ಸುಳ್ಳು ಹೆಳುವ ಪ್ರಧಾನಿ ನರೇಂದ್ರ ಮೋದಿ ಎಂದರು. ಸುಳ್ಳು ಬಿಜೆಪಿಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು- ಬಂತೇ ಎಂದು ಪ್ರಶ್ನಿಸಿದರು. ಗ್ಯಾಸ್, ಗೊಬ್ಬರ, ಬೆಲೆ ಏರಿದರು, ರೂಪಾಯಿ ಬೆಲೆ ಕುಸಿಯಿತು. ಇಂದಿನವರೆಗೆ ಏನೂ ಮಾಡಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ, ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯುತ್ತೇನೆ ಎಂದರು. ಆಗಿದೆಯೇ.? ಯುವಕರಿಗೆ ಪ್ರತಿ ವರ್ಷ 20 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದವರಿಗೆ ಇಂದಿನವರೆಗೆ ಮಾಡಲಾಗಿಲ್ಲ. ನರೇಂದ್ರ ಮೋದಿಯವರು ನುಡಿದಂತೆ ನಡೆದಿಲ್ಲ. ಬಿಜೆಪಿಗೆ ಮತ ಹಾಕಬೇಕೆ ಎಂದು ಜನರನ್ನು ಪ್ರಶ್ನಿಸಿದಾಗ ಅವರು ಇಲ್ಲ ಎಂದು ಕೂಗಿದರು.