ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ.
ರಾಹು ಕಾಲ ಸಂಜೆ 04:35 ರಿಂದ 05:59
ಯಮಘಂಡ ಕಾಲ ಮಧ್ಯಾಹ್ನ 12:19 ರಿಂದ 01:44
ಗುಳಿಕ ಕಾಲ ಮಧ್ಯಾಹ್ನ 03:10 ರಿಂದ 04:35
ತುಲಾ ರಾಶಿ: ವಾಗ್ವಾದ ನಡೆದರೂ ಮನವೊಲಿಸಿ ಸರಿದಾರಿಗೆ ತರಬಹುದು. ನಿಮ್ಮ ಚರಾಸ್ತಿಯನ್ನು ಯಾರಾದರೂ ಬಳಸಿಯಾರು. ನಿಮ್ಮ ಮೇಲೆ ನಿಮಗೆ ಪೂರ್ಣ ನಂಬಿಕೆ ಇಟ್ಟು ಕೆಲಸ ಮಾಡಿದರೆ ಯಶಸ್ಸು ಸಾಧಿಸಬಹುದು. ನಿಮ್ಮಅಹಂಕಾರದ ಮಾತುಗಳಿಂದ ಮಿತ್ರರೇ ನಿಮ್ಮ ವಿರುದ್ಧ ತಿರುಗಿ ನಿಲ್ಲಬಹುದು. ಅಪರಿಚಿತರು ಮನೆಗೆ ಬರಬಹುದು. ನಿಮ್ಮ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಮನೆಯಲ್ಲಿ ನಿಮ್ಮ ಕಾರ್ಯಗಳಿಗೆ ಹಿರಿಯರಿಂದ ವಿರೋಧ ಬರಲಿದೆ. ಅಪಮಾನವನ್ನು ಧೈರ್ಯದಿಂದ ಎದುರಿಸಲು ಮುಂದಾಗುವಿರಿ. ತಿಳಿವಳಿಕೆಯು ಇಂದು ನಿಮಗೆ ಮುಜುಗರವನ್ನು ತರಬಹುದು. ಸೋಲಿನಿಂದ ಬಹಳ ಬೇಸರವಾಗಲಿದೆ. ನಿಮ್ಮ ವೃತ್ತಿಯನ್ನು ಪ್ರೀತಿಸುವುದು ಅನಿವಾರ್ಯವೇ ಆಗಿರುತ್ತದೆ. ಅದು ನಿಮಗೆ ಅನುಕೂಲವನ್ನು ಮಾಡಿಕೊಡುವುದು. ಸಿಕ್ಕ ಅವಕಾಶಗಳನ್ನು ಇನ್ನೊಬ್ಬರಿಗೆ ಕೊಡುವ ಮೊದಲು ಯೋಚಿಸಿ.
ವೃಶ್ಚಿಕ ರಾಶಿ: ಮನೆಯ ಆತಂಕಗಳು ದೂರವಾಗುವ ಸಂಭವವಿದೆ. ಇಂದು ಯಾರ ಬಳಿಯೂ ಏನ್ನೂ ಹೇಳಿಸಿಕೊಳ್ಳದೇ ಕೆಲಸವನ್ನು ಮಾಡುವಿರಿ. ಇಂದು ನೀವು ಅನನೂಕುಲ ಸ್ಥಿತಿಯಿಂದ ಹೊರ ಬರುವಿರಿ. ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ಧಾರ್ಮಿಕ ಆಚರಣೆಯಲ್ಲಿ ಅನಿರೀಕ್ಷಿತವಾಗಿ ತೊಡಗುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ವಾಹನ ಸಂಚಾರಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರದಲ್ಲಿ ಸಡಿಲಿಕೆ ಬೇಡ. ಭವಿಷ್ಯದ ಕನಸಿನಿಂದ ನೀವು ಹೊರಬನ್ನಿ. ಪಥ್ಯವಾದ ಆಹಾರವನ್ನು ಸೇವಿಸುವುದು ಬೇಡ. ಮನೆಯಲ್ಲಿ ಅಧ್ಯಯನಕ್ಕೆ ತೊಂದರೆಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ತಾಯಿಯ ಸೇವೆಯನ್ನು ಶ್ರದ್ಧೆಯಿಂದ ಮಾಡಲಿದ್ದೀರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿನಿಂದ ಕೆಲವರನ್ನು ನೀವು ಕಳೆದುಕೊಳ್ಳುವಿರಿ.
ಧನು ರಾಶಿ: ಸಾಲ ಕೊಟ್ಟವರ ಜೊತೆ ವ್ಯವಹಾರ ಚನ್ನಾಗಿರಲಿ. ಮನೋವಿಕಾರದಿಂದ ಜೊತೆಗಾರರಿಗೆ ತೊಂದರೆಯಾಗುವುದು. ಪ್ರವಾಸಕ್ಕೆ ಸ್ನೇಹಿತರ ಜೊತೆ ಎಲ್ಲಗಾದರೂ ಹೋಗುವಿರಿ. ಅನಿರೀಕ್ಷಿತ ಧನವನ್ನು ಪಡೆಯುವಿರಿ. ಸಮಾರಂಭಗಳಿಗೆ ಹೋಗುವಿರಿ. ವಂಚನೆಗೆ ಸಿಕ್ಕಿಕೊಳ್ಳುವಿರಿ. ಯೋಗ್ಯತೆ ಅನುಸಾರವಾಗಿ ನಿಮ್ಮ ಮಾತು ಇರಲಿ. ಯಾರು ಏನೇ ಅಂದರೂ ನೀವು ಮಾತ್ರ ಯಥಾಸ್ಥಾನದಲ್ಲಿ ಇರುವುದು. ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶಗಳು ಸಿಗದೇ ಹೋಗಬಹುದು. ವೃತ್ತಿಯಲ್ಲಿ ನಿಮ್ಮ ಸ್ಥಾನವನ್ನು ಭದ್ರವಾಗಿರಿಸಿಕೊಳ್ಳಲು ನೋಡುವಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು. ಮನೆಯವರ ಸಣ್ಣ ತಪ್ಪುಗಳನ್ನು ನೀವು ಸಹಿಸಲಾರಿರಿ.
ಮಕರ ರಾಶಿ: ಪರ ಊರಿನಲ್ಲಿ ವಾಸ ಮಾಡುವುದು ಕಷ್ಟ. ಇಂದು ವ್ಯವಹಾರದಲ್ಲಿ ಸ್ಥೈರ್ಯವು ಬೇಕಾಗುವುದು. ನಿಮ್ಮ ಖರ್ಚು ಅಧಿಕವಾದರೂ ಒಳ್ಳೆಯ ಕಾರ್ಯಕ್ಕೆ ಆಗುತ್ತದೆ. ಇಂದು ವಿಸ್ಮರಣೆಯಿಂದ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಕ್ಷಣಿಕ ಸುಖಕ್ಕೆ ಮೈಮರೆಯಬಹುದು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ಒಂದೇ ಕೆಲಸವನ್ನು ಬಹಳ ಕಾಲ ಮಾಡುವುದು ನಿಮಗೆ ಇಷ್ಟವಾಗದು. ಆಸ್ತಿ ಖರೀದಿಯ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಲಭ್ಯವಾಗದು. ಸಾಕಾಗದು. ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಸಿಗಲಿದೆ. ಪ್ರಯಾಣವನ್ನು ಆನಂದಿಸುವಿರಿ. ನಿಮಗೆ ಬೇಕಾದವರಿಂದ ಸಹಾಯ ಸಿಗದೇಹೋಗಬಹುದು.
ಕುಂಭ ರಾಶಿ: ನಿಮ್ಮ ಯಶಸ್ಸಿಗೆ ನೀವೇ ಕಾರಣರು. ಜೊತೆಗಾರರನ್ನು ನೀವು ವಿರೋಧ ಮಾಡಿಕೊಳ್ಳದೇ ಇರಬೇಕು. ನಿಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇಂದು ಆಗದು. ನೀವು ಇಂದು ಯಾರ ಮಾತನ್ನೂ ಕೇಳದ ಸ್ಥಿತಿಯಲ್ಲಿ ಇರುವಿರಿ. ಸುಲಭವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ಆಸಕ್ತಿಯಿರುವುದು. ನಿಮ್ಮ ವರ್ತನೆಯು ಅಹಂಕಾರದಂತೆ ಇರಲಿದೆ. ಹಣವನ್ನು ಬಹಳ ಜೋಪಾನವಾಗಿ ತೆಗೆದಿಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಲಿದೆ. ಯಾವುದಾದರೂ ಸರಳ ವೃತ್ತಿಯಲ್ಲಿ ಕೆಲಸ ಮಾಡುವಿರಿ. ಸ್ನೇಹಿತರಿಗೆ ನೀವು ಸಮಯವನ್ನು ಕೊಡಬೇಕಾಗಬಹುದು.
ಮೀನ ರಾಶಿ: ವೈಯಕ್ತಿಕ ಕಾರ್ಯಕ್ಕೆ ಅನ್ಯರ ಸಹಕಾರವನ್ನು ಕೋರುವಿರಿ. ಇಂದು ವಿದ್ಯಾಭ್ಯಾಸದಲ್ಲಿ ಬುದ್ಧಿಪೂರ್ವಕವಾಗಿ ಪ್ರಯತ್ನವನ್ನು ಮಾಡಬೇಕು. ನೀವು ಪ್ರಮುಖ ವ್ಯಕ್ತಿಯ ಇಂದು ಸಂಬಂಧವನ್ನು ಬೆಳೆಸುವಿರಿ. ಇನ್ನೊಬ್ಬರಲ್ಲಿ ತಪ್ಪನ್ನೇ ಹುಡುಕುವ ಕೆಲಸ ಇಂದು ಬೇಡ. ಇಂದು ನೀವು ಮಾತನಾಡುವ ಸಂದರ್ಭವು ಕಡಿಮೆ ಇರುವುದು. ಧೈರ್ಯವಿಲ್ಲದೇ ಸಾಹಸ ಮಾಡುವುದು ಬೇಡ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು. ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಓಡಾಟವು ಅಧಿಕ ಆಯಾಸವನ್ನು ತರಿಸಬಹುದು. ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುವಿರಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು.