ನಟ ದರ್ಶನ್ ಗೆ ಇಂದು ಸುಪ್ರೀಂಕೋರ್ಟ್ ನಲ್ಲೂ ಸಂಕಷ್ಟ ಎದುರಾಗಿದೆ. ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆ ರಾಜ್ಯ ಸರ್ಕಾರದಿಂದ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಇಂದು ಸುಪ್ರೀಂನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಕಡಿಮೆ ಇದೆ. ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡುವ ಸಾಧ್ಯತೆಯೇ ಹೆಚ್ಚು.
ಹೀಗಾಗಿ ಹೈಕೋರ್ಟ್ ಆದೇಶದ ನಂತರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು ನಟ ದರ್ಶನ್. ಸರ್ಜರಿ ಮಾಡದಿದ್ದರೆ ಸ್ಟ್ರೋಕ್ ಆಗುವ ಸಾಧ್ಯತೆ ಅಂತ ಹೇಳಲಾಗಿತ್ತು. ಆದರೆ ಇನ್ನು ಆಪರೇಷನ್ ಮಾಡದಿರುವುದರಿಂದ ಮಧ್ಯಂತರ ಜಾಮೀನು ರದ್ದುಕೋರಿ ರಾಜ್ಯ ಸರ್ಕಾರದಿಂದ ಅರ್ಜಿ ಸಲ್ಲಿಕೆಯಾಗಿದೆ.