ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಕೊಲೆಖಂಡಿಸಿ, ಧಾರವಾಡ ಅರ್ಧದಿನ ಬಂದ್ ಆಗಲಿದೆ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸಮುದಾಯದಿಂದ ಏ.22 ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ಹೇಳಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ವರೆಗೆ ಅಂಗಡಿ ಧಾರವಾಡ ಬಂದ್ ಆಗಲಿದೆ. ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಅಂತ ಸ್ಟಿಕ್ಕರ್ ಹಚ್ಚುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ಹೇಳಿದರು.
ಅಂಜುಮನ್ ಸಂಸ್ಥೆ ಮುಖಂಡರು ಇಂದು ಏ.21 ನೇಹಾ ಮನೆಗೆ ತೆರಳಿ, ನೇಹಾ ತಂದೆ ನಿರಂಜನ ಹಿರೇಮಠ ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.ಕೊಲೆ ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ಆಗಬೇಕು. ಈಗಾಗಲೇ ಪೊಲೀಸ್ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ. ಇದು ವಿಶೇಷ ಪ್ರಕರಣ ಅಂತ ಪರಿಗಣಿಸಿ 90 ದಿನದಲ್ಲಿ ಪ್ರಕರಣ ಬಗೆಹರಿಸಬೇಕು. ಸಮಾಜ ಯಾವುದೇ ಇರಲಿ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.