ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಕಾಗೆ (28) ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗದಿಂದ ನಿಧನರಾಗಿದ್ದಾರೆ.
ದೀರ್ಘಕಾಲದಿಂದ ಹೃದಯ ರೋಗದಿಂದ ಬಳಲುತ್ತಿದ್ದ ಕೃತಿಕಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ನಾಳೆ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ (ಚಿಕ್ಕೋಡಿ ತಾಲೂಕು) ಕೃತಿಕಾ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಆಕ್ರಂದನ ಮುಗಿಲುಮುಟ್ಟಿದೆ.