8 ವರ್ಷ ಪ್ರೀತಿಸಿ ಮತ್ತೊಬ್ಬನ ಸಂಗ: ವಿವಾಹಿತ ಶಿಕ್ಷಕಿ ಕೈಕೊಟ್ಟಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

123 (40)

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಿವಾಹಿತ ಶಿಕ್ಷಕಿಯೊಬ್ಬರು 8 ವರ್ಷಗಳ ಕಾಲ ಸಂಬಂಧದಲ್ಲಿದ್ದ ಶಿಕ್ಷಕನನ್ನು ಕೈಬಿಟ್ಟ ಕಾರಣ, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಶಿಕ್ಷಕನ ಕುಟುಂಬಸ್ಥರು ಶಿಕ್ಷಕಿಯ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದಾಸರಹಳ್ಳಿ: ಮಾಕಳಿ ಗ್ರಾಮದಲ್ಲಿ ಟ್ಯೂಷನ್ ಸೆಂಟರ್ ನಡೆಸುತ್ತಿದ್ದ ಆನಂದ (35) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಶಿಕ್ಷಕಿ ಹೇಮಲತಾ ವಿರುದ್ಧ ಮೃತನ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT
ADVERTISEMENT

ಆನಂದ ಮತ್ತು ಹೇಮಲತಾ ಕಳೆದ 8 ವರ್ಷಗಳಿಂದ ಅಕ್ರಮ ಸಂಬಂಧದಲ್ಲಿದ್ದರು. ಇಬ್ಬರೂ ಒಟ್ಟಿಗೆ ಮಾಕಳಿಯಲ್ಲಿ ಟ್ಯೂಷನ್ ಸೆಂಟರ್ ಆರಂಭಿಸಿದ್ದರು. ಆದರೆ, ಇತ್ತೀಚೆಗೆ ಹೇಮಲತಾ ಮತ್ತೊಬ್ಬ ವ್ಯಕ್ತಿಯ ಜೊತೆಗೆ ಒಡನಾಟ ಹೆಚ್ಚಿಸಿದ್ದರಿಂದ, ಇವರಿಬ್ಬರ ನಡುವೆ ವಾಗ್ವಾದ ಉಂಟಾಗಿತ್ತು. ಆನಂದ ಟ್ಯೂಷನ್ ಸೆಂಟರ್‌ಗೆ ಮತ್ತು ತನ್ನ ಮನೆಯಿಂದ ಸುಮಾರು ₹5 ಲಕ್ಷ ಹಣವನ್ನು ನೀಡಿದ್ದ. ಈ ವಿಷಯದಿಂದ ಗಲಾಟೆ ತಾರಕಕ್ಕೇರಿತು. ಹೇಮಲತಾ ತನ್ನ ಪತಿ ತಿಮ್ಮಯ್ಯಗೆ ವಿಷಯ ತಿಳಿಸಿ, ಆನಂದನಿಗೆ ಬೆದರಿಕೆ ಹಾಕಿದ್ದಳು ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ಆನಂದ ಟ್ಯೂಷನ್ ಸೆಂಟರ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರಿದ್ದಾರೆ.

ವಾಟ್ಸಾಪ್ ಸ್ಟೇಟಸ್‌ನಲ್ಲಿ ಆರೋಪ:
ಆನಂದ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿದ್ದು, ವಾಟ್ಸಾಪ್ ಸ್ಟೇಟಸ್‌ನಲ್ಲಿ ಹೇಮಲತಾರ ಕಿರುಕುಳದ ಬಗ್ಗೆ ಆರೋಪಿಸಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಘಟನೆಗೆ ಸಂಬಂಧಿಸಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 108ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

     

    Exit mobile version