ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಜಗಳ ಬಿಡಿಸಲು ಬಂದ ವ್ಯಕ್ತಿ ಮೇಲೆ ದಾಳಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ದೊಡ್ಡ ಮಸೀದಿ ಬಳಿ ನಡೆದಿದೆ.
ಈ ಗಲಾಟೆ ತೀವ್ರ ಸ್ವರೂಪ ಪಡೆದು, ಜುನೈದ್ ಎಂಬ ಯುವಕ ಅಜ್ಗರ್ ಅಲಿ ಎಂಬುವವನ ಮುಖಕ್ಕೆ ಬ್ಲೇಡ್ ದಾಳಿ ನಡೆಸಿದ್ದಾನೆ. ಈ ಘಟನೆಯಿಂದ ಗಾಬರಿಗೊಂಡ ಸ್ಥಳೀಯರು ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ, ಗಲಾಟೆ ನಿಯಂತ್ರಿಸಲು ಬಂದ ಚಳ್ಳಕೆರೆ ಪೊಲೀಸ್ ಠಾಣೆಯ ಪೇದೆ ವೆಂಕಟೇಶ್ ಮೇಲೂ ಹಲ್ಲೆ ನಡೆದಿದೆ. ಆಸ್ಪತ್ರೆಯಲ್ಲಿ ಮಾಹಿತಿ ಪಡೆಯಲು ಬಂದಿದ್ದ ಪೇದೆ ಮೇಲೆ ಆರೋಪಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅಜ್ಗರ್ ಅಲಿ ಹಾಗೂ ಪೇದೆ ವೆಂಕಟೇಶ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.