ಭೀಕರ ರಸ್ತೆ ಅಪಘಾತ: ಐದು ಮಂದಿ ದುರ್ಮರಣ

Hdffhdhdh

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಇನ್ನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಐದು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ತಮಿಳುನಾಡು ಮೂಲದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಶಾಂತಮೂರ್ತಿ, ಚಿದಂಬರ ಚಾರ್, ಮಲ್ಲಿಕಾರ್ಜುನ್ ಮತ್ತು ರುದ್ರಸ್ವಾಮಿ ಎಂಬುವವರು ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಗಂಭೀರವಾಗಿ ಗಾಯಗೊಂಡು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ADVERTISEMENT
ADVERTISEMENT

ಅಪಘಾತದಲ್ಲಿ ಸಾವನ್ನಪ್ಪಿದವರು ಬೆಂಗಳೂರಿನ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 

Exit mobile version