ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ನಲ್ಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. ನಲ್ಲಿಕಟ್ಟೆ ಗ್ರಾಮದ ನಿವಾಸಿಗಳಾಗಿದ್ದು, ನಾಗರಾಜ (35) ಶ್ರೀನಿವಾಸ (48) ಮೃತ ದುರ್ದೈವಿಗಳಾಗಿದ್ದಾರೆ.
ತೋಟದಲ್ಲಿ ತೆಂಗಿನ ಕಾಯಿ ಕೀಳಲು ತೆರಳಿದ್ದಾಗ ಈಜಲು ಹೋಗಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 12 ಅಡಿ ಆಳದ ಕೃಷಿ ಹೊಂಡದಲ್ಲಿ ಮುಳುಗಿ ಉಸಿರುಕಟ್ಟಿ ಸಾವಗೀಡಾಗಿದ್ದಾರೆ. ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು,ಇವರಿಬ್ಬರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.