ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ: ಬಿ.ವೈ. ವಿಜಯೇಂದ್ರ

Siddu stalin kcr (65)

ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ, ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು (ಏಪ್ರಿಲ್10) ಮಾತನಾಡಿದ ಅವರು, ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೋದಿಜೀ ಅವರ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು.

ADVERTISEMENT
ADVERTISEMENT

ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಅನುದಾನವೂ ಇಲ್ಲ, ರಾಜ್ಯದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಬೆಂಗಳೂರಿನ ಮುಖ್ಯಮಂತ್ರಿಗಳೇ ಅಥವಾ ರಾಜ್ಯದ ಮುಖ್ಯಮಂತ್ರಿಗಳೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

ಬಸವರಾಜ ರಾಯರೆಡ್ಡಿ ಅವರದು ದಿಟ್ಟವಾಗಿ ಮಾತನಾಡುವ ಸ್ವಭಾವ. ಅವರು ಸತ್ಯವನ್ನೇ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಬೇರೆಬೇರೆ ಹಗರಣಗಳ ಬಳಿಕ ಅವರು ಕೂಡ ಬೇಸತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು. ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ಸ್ಥಾನಕ್ಕೆ ತಲುಪಿದೆ ಎಂದರೆ ಅದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ದಲಿತರಿಗೆ ಅನ್ಯಾಯ ಮಾಡುವವರು ಕಾಂಗ್ರೆಸ್ ಪಕ್ಷದವರು. ಮೊನ್ನೆ ರಾಹುಲ್ ಗಾಂಧಿ ಅವರನ್ನು ನೋಡಿದ್ದೀರಿ. ಗಾಂಧೀಜಿ, ಬಾಬಾಸಾಹೇಬ ಅಂಬೇಡ್ಕರರ ಕುರಿತ ಅವರ ಕಳಕಳಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿಜೆಪಿ, ದಲಿತರ ಪರವಾಗಿ ಯೋಜನೆಗಳನ್ನು ನೀಡುತ್ತಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version